| ದಾವಣಗೆರೆ, ಮಾ.11 : ದಾವಣಗೆರೆ ಮಹಾನಗರ ಪಾಲಿಕೆಯು ಕಾಂಗ್ರೆಸ್ ವಶವಾಗಿದ್ದು, ಮಾ.7ರಂದು 41 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 36 ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಕೇವಲ 1 ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ.ಜಿಲ್ಲೆಯಲ್ಲಿ ಶೇ 78.43 ಮತಗಳು ಚಲಾವಣೆಯಾಗಿತ್ತು. ಕೆಪಿಸಿಸಿ ಖಜಾಂಚಿ ಶಾಮನೂರು ಶಿವಶಂಕರಪ್ಪ ಅವರ ತವರು ನೆಲದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದ್ದು, ನೂತನವಾಗಿ ಸ್ಥಾಪಿತವಾಗಿರುವ ಯಡಿಯೂರಪ್ಪ ನೇತೃತ್ವದ ಕೆಜೆಪಿ ತನ್ನ ಖಾತೆ ತೆರೆಯುವಲ್ಲಿ ವಿಫಲವಾಗಿದೆ.... |