|
ದೇಶದ ಆಹಾರ ಧಾನ್ಯಗಳ ಗೋದಾಮುಗಳಲ್ಲಿ ಸಂಗ್ರಹವಾಗಿರುವ ಆಹಾರ ಧಾನ್ಯಗಳನ್ನು ಶೀಘ್ರವೇ ಬಡವರಿಗೆ ಹಾಗೂ ಜನಸಾಮಾನ್ಯರಿಗೆ ವಿಲೇವಾರಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಂಗಳವಾರ ವಿತ್ತ ಸಚಿವ ಪ್ರಣಬ್ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವರ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವರ್ಷದ ಮುಂಗಾರು ಸಮಯದಲ್ಲಿ ಉತ್ಪತ್ತಿಯಾಗುವ ಆಹಾರ ಧಾನ್ಯಗಳನ್ನು ಸಂಗ್ರಹಿಸಿಡಲು ಗೋದಾಮುಗಳಲ್ಲಿ ಅಗತ್ಯ ಸ್ಥಳಾವಕಾಶದ ಕೊರತೆಯಿರುವುದರಿಂದ ಈಗಾಗಲೇ ಸಂಗ್ರಹವಾಗಿರುವ ಆಹಾರ ಧಾನ್ಯಗಳನ್ನು...
|